ADVERTISEMENT

₹12 ಲಕ್ಷ ಮೌಲ್ಯದ ಕದ್ದ ಚಿನ್ನಾಭರಣ ವಶ:ಬಂಧನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 20:50 IST
Last Updated 21 ಮಾರ್ಚ್ 2021, 20:50 IST
ಆರೋಪಿಯಿಂದ ಜಪ್ತಿ ಮಾಡಿರುವ ಚಿನ್ನಾಭರಣ
ಆರೋಪಿಯಿಂದ ಜಪ್ತಿ ಮಾಡಿರುವ ಚಿನ್ನಾಭರಣ   

ಬೆಂಗಳೂರು: ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದ ಬಳಿ ಪ್ರಯಾಣಿಕರ ಬ್ಯಾಗ್‌ಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಲಗ್ಗೆರೆಯ ಕಾವೇರಿ ನಗರದ ನಿವಾಸಿ ಸಿದ್ದಿಕ್ (30) ಬಂಧಿತ ಆರೋಪಿ.

ಮಾ.10ರ ರಾತ್ರಿ ಬಸ್ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ 25 ಗ್ರಾಂ ಚಿನ್ನವನ್ನು ಆರೋಪಿ ಕದ್ದಿದ್ದ. ಈ ಸಂಬಂಧ ಮಹಿಳೆಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದರು.

ADVERTISEMENT

‘ಈತ ಹೆಚ್ಚು ಸಮಯವನ್ನು ಬಸ್‌ ನಿಲ್ದಾಣದಲ್ಲೇ ಕಳೆಯುತ್ತಿದ್ದ. ಅಲ್ಲಿಗೆ ಬರುತ್ತಿದ್ದ ಪ್ರಯಾಣಿಕರ ಚಲನವಲನಗಳನ್ನು ಗಮನಿಸಿ, ಚಿನ್ನಾಭರಣ ಇರುತ್ತಿದ್ದ ಬ್ಯಾಗ್‌ಗಳನ್ನು ಪತ್ತೆ ಮಾಡುತ್ತಿದ್ದ. ಬಳಿಕ ಸಾರ್ವಜನಿಕರಿಗೆ ತಿಳಿಯದಂತೆ ಬ್ಯಾಗ್‌ನಿಂದ ಚಿನ್ನಾಭರಣ ಕದಿಯುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಯನ್ನು ವಿಚಾರಣೆ ನಡೆಸಿದಾಗ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ಕು ಕಳವು ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಸಂಬಂಧಿಸಿದ ₹12 ಲಕ್ಷ ಬೆಲೆ ಬಾಳುವ 275 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.