ADVERTISEMENT

ಸರ್ಕಾರಿ ನೌಕರರ ಮುಷ್ಕರ: ಭಣಗುಡುತ್ತಿರುವ ಆಡಳಿತದ ಶಕ್ತಿ ಕೇಂದ್ರ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 7:33 IST
Last Updated 1 ಮಾರ್ಚ್ 2023, 7:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವೇತನ ಪರಿಷ್ಕರಣೆಯೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿರುವುದರಿಂದ ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ವಿಧಾನಸೌಧ ಬಿಕೋ ಎನ್ನುತ್ತಿದೆ.

ಬಹುತೇಕ ಸರ್ಕಾರಿ ನೌಕರರು ಮುಷ್ಕರವನ್ನು ಬೆಂಬಲಿಸಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಹಿರಿಯ ಅಧಿಕಾರಿಗಳು ಮಾತ್ರ ಕಚೇರಿಗಳಿಗೆ ಹಾಜರಾಗಿದ್ದಾರೆ. ಆದರೆ, ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲದಿರುವುದರಿಂದ ಯಾವುದೇ ಕೆಲಸವೂ ನಡೆಯುತ್ತಿಲ್ಲ.

ವಿಧಾನಸೌಧ, ವಿಕಾಸಸೌಧ, ಎಂ.ಎಸ್‌. ಬಿಲ್ಡಿಂಗ್‌ಗಳಲ್ಲಿರುವ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಇದೇ ಸ್ಥಿತಿ ಇದೆ. ಎಲ್ಲ ಕಡೆಗಳಲ್ಲೂ ಹೆಚ್ಚಿನ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ನೌಕರರ ಸಂಘದ ಪದಾಧಿಕಾರಿಗಳು ಬೆಳಿಗ್ಗೆಯಿಂದಲೂ ವಿವಿಧ ಕಚೇರಿಗಳಿಗೆ ಭೇಟಿನೀಡಿ ಸದಸ್ಯರ ಬೆಂಬಲ ಯಾಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.