ADVERTISEMENT

ಪಿಂಚಣಿ ಸೌಲಭ್ಯಕ್ಕೆ ಒತ್ತಾಯ

ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 21:54 IST
Last Updated 18 ಜನವರಿ 2020, 21:54 IST
ಸಭೆಯಲ್ಲಿ ಪಾಲ್ಗೊಂಡಿದ್ದ ಸಂಘದ ಸದಸ್ಯರು
ಸಭೆಯಲ್ಲಿ ಪಾಲ್ಗೊಂಡಿದ್ದ ಸಂಘದ ಸದಸ್ಯರು   

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 3 ಸಾವಿರದಷ್ಟು ನೌಕರರು ಕೆಲಸ ಮಾಡುತ್ತಿದ್ದು, ಅವರಿಗೆ ಪಿಂಚಣಿ ಸೌಲಭ್ಯವನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಲಾಗಿದೆ.

ಶನಿವಾರ ಇಲ್ಲಿ ನಡೆದ ಕರ್ನಾಟಕ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮೊದಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

‘ನೂತನ ಪಿಂಚಣಿ ಯೋಜನೆಗೆ ಬಜೆಟ್‌ನಲ್ಲಿ ಹಣ ಹೊಂದಿಸಲು ಸಾಧ್ಯವಿಲ್ಲ, ಆಯಾ ಸಂಸ್ಥೆಗಳ ಸಂಪನ್ಮೂಲದಲ್ಲೇ ಹಣ ಹೊಂದಿಸಿಕೊಂಡು ಎನ್‌ಪಿಎಸ್‌ ಆರಂಭಿಸಲು ಸರ್ಕಾರ ಸೂಚಿಸಿದೆ. ಆದರೆ ಹಲವು ಸಂಸ್ಥೆಗಳಲ್ಲಿ ಸಂಪನ್ಮೂಲದ ಕೊರತೆ ಇದೆ, ಇಂತಹ ಕ್ರಮ ಕೈಗೊಂಡರೆ ರೋಗಿಗಳ ಮೇಲೆ ಹೊರೆ ಬೀಳುವ ಸಾಧ್ಯತೆಯೂ ಇರುತ್ತದೆ.ಹೀಗಾಗಿ ಸರ್ಕಾರವೇ ಈ ಯೋಜನೆಗೆ ಬಜೆಟ್‌ ನಿಗದಿಪಡಿಸಿ ಜಾರಿಗೆ ತರಬೇಕು. 14 ವರ್ಷಗಳಿಂದ ಮಾಡುತ್ತಿರುವ ಈ ಒತ್ತಾಯವನ್ನು ಈಡೇರಿಸಬೇಕು’ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ADVERTISEMENT

ಅಧ್ಯಕ್ಷ ಡಾ.ಎ.ಎ.ನದಾಫ್‌ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.