ADVERTISEMENT

21 ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ

ವಿದ್ಯಾಶಿಲ್ಪ ಕಮ್ಯುನಿಟಿ ಟ್ರಸ್ಟ್‌ನಿಂದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 19:51 IST
Last Updated 22 ಜುಲೈ 2019, 19:51 IST
ಕಾರ್ಯಕ್ರಮದಲ್ಲಿ ಉದ್ಯಮಿ ಡಾ.ಪಿ.ದಯಾನಂದ ಪೈ, ಶಿಕ್ಷಣ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕ ಸಿ.ಬಿ.ಜಯರಂಗ, ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಸಿದ್ಧರಾಮಣ್ಣ, ಮಕ್ಕಳ ಹಕ್ಕುಗಳ ಸಂಸ್ಥೆಯ ಟ್ರಸ್ಟಿ ವಾಸುದೇವ ಶರ್ಮ, ಶಿಕ್ಷಕರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಗಿರೀಶ್ ಇದ್ದರು

ಯಲಹಂಕ: ರಾಜ್ಯ ಸರ್ಕಾರದ ಅನುಮತಿ ದೊರೆತರೆ ₹1.20 ಕೋಟಿ ವೆಚ್ಚದಲ್ಲಿ ಬ್ಯಾಟರಾಯನಪುರ ಸರ್ಕಾರಿ ಶಾಲೆಯ ನೂತನ ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದು ಉದ್ಯಮಿಪಿ. ದಯಾನಂದ ಪೈ ಹೇಳಿದರು.

ಬ್ಯಾಟರಾಯನಪುರದ ಸ.ಹಿ.ಪ್ರಾ. ಶಾಲೆಯಲ್ಲಿ ಆಯೋಜಿಸಿದ್ದ ‘ವಿದ್ಯಾಶಿಲ್ಪ ಕಮ್ಯುನಿಟಿ ಟ್ರಸ್ಟ್‌ನಿಂದ 21 ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದದರು.

‘ಹಲವು ವರ್ಷಗಳ ಹಿಂದೆಯೇ ನೂತನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ
ದಿಂದ ಯೋಜನೆ ನನೆಗುದಿಗೆ ಬಿದ್ದಿತ್ತು. ಈಗಲೂ ಅನುಮತಿ ನೀಡಿದರೆ ಕಟ್ಟಡ ನಿರ್ಮಿಸಿ, ಮೂಲಸೌಕರ್ಯ ಒದಗಿಸಲಾಗುವುದು’ ಎಂದರು.

ADVERTISEMENT

ಟ್ರಸ್ಟ್‌ ಸಂಸ್ಥಾಪಕ ಕಿರಣ್ ಪೈ, ‘ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯ ಒದಗಿಸಬೇಕೆಂಬ ಉದ್ದೇಶದಿಂದ ಟ್ರಸ್ಟ್ ದತ್ತು ಪಡೆದಿದ್ದು, ಅವುಗಳ ಅಭಿವೃದ್ಧಿಗೆ ಶ್ರಮಿಸಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.