ADVERTISEMENT

ಹೆಸರಘಟ್ಟ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೇಕಿದೆ ಶೌಚಾಲಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 18:37 IST
Last Updated 3 ಡಿಸೆಂಬರ್ 2018, 18:37 IST
ಹದಗೆಟ್ಟ ಶೌಚಾಲಯ
ಹದಗೆಟ್ಟ ಶೌಚಾಲಯ   

ಬೆಂಗಳೂರು: ಹೆಸರಘಟ್ಟ ಹೋಬಳಿ ಬುಡವನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯವಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

36 ವಿದ್ಯಾರ್ಥಿಗಳು ಉಳ್ಳ ಶಾಲೆಗೆ ಶೌಚಾಲಯವೇ ಇಲ್ಲ. ಹಳೆಯ ಶೌಚಾಲಯವು ಸಂಪೂರ್ಣವಾಗಿ ಅಧ್ವಾನವಾಗಿದೆ. ಹೆಣ್ಣು ಮಕ್ಕಳು ಗ್ರಾಮದ ಮನೆಗಳಲ್ಲಿ ಶೌಚಾಲಯಕ್ಕೆ ಹೋಗುತ್ತಾರೆ. ಗಂಡು ಮಕ್ಕಳು ಬಯಲಿನಲ್ಲಿ ಶೌಚಕ್ಕೆ ಹೋಗಬೇಕಾಗಿದೆ. ಹೊಸ ಕೊಠಡಿಯ ಜೊತೆ ಶೌಚಾಲಯವನ್ನೂ ನಿರ್ಮಿಸಿದ್ದರೆ ಮಕ್ಕಳಿಗೆ ಅನುಕೂಲವಾಗುತ್ತಿತ್ತು ಎನ್ನುತ್ತಾರೆ ಪೋಷಕರು. 1966ರಲ್ಲಿ ಈ ಶಾಲೆ ಆರಂಭಗೊಂಡಿತ್ತು.ಹಳೆಯ ಕಟ್ಟಡವನ್ನು ಕೆಡವಿ ಜಿಲ್ಲಾ ಪಂಚಾಯಿತಿ ಮತ್ತು ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರ ತಲಾ ₹5 ಲಕ್ಷಗಳ ಅನುದಾನದಿಂದ ಎರಡು ಕೊಠಡಿಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಯಿತು. ಆದರೆ ಹೊಸ ಕೊಠಡಿಗಳಿಗೆ ಇನ್ನು ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಅಧಿಕಾರಿಗಳು ನೀಡಿಲ್ಲ ಎನ್ನುವ ಅಸಮಾಧಾನವನ್ನು ವ್ಯಕ್ತಪಡಿಸಿದರು ಗ್ರಾಮಸ್ಥರು.

ಯಲಹಂಕ ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ ಅವರು ಪ್ರತಿಕ್ರಿಯಿಸಿ ‘ಈಗಾಗಲೇ ನಾನು ಪ್ರಾಥಮಿಕ ಸೌಲಭ್ಯದ ಸಮಸ್ಯೆ ಎದುರಿಸುತ್ತಿರುವ ಶಾಲೆಗಳ ಪಟ್ಟಿಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.