ADVERTISEMENT

ಬಿಡಿಎ ಕಾರ್ನರ್ ನಿವೇಶನ ಹರಾಜಿಗೆ ರಾಜ್ಯ ಸರ್ಕಾರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 8:34 IST
Last Updated 13 ಏಪ್ರಿಲ್ 2020, 8:34 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಯಲ್ಲಿರುವ12ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಿಂದಸುಮಾರು ₹ 15 ಸಾವಿರ ಕೋಟಿ‌ ರೂಪಾಯಿ ಆದಾಯ ಗಳಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಅನಧಿಕೃತ ಕಟ್ಟಡಗಳಿಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳ ವಿಲೇವಾರಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಎಂಎಸ್ಐಎಲ್ ಮೂಲಕ ಮದ್ಯ ಮಾರಾಟ ಮಾಡುವಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ADVERTISEMENT

ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ₹ 2834 ಕೋಟಿಕೂಡಲೇ ಪಾವತಿಸಲು ಸೂಚಿಸಲಾಗಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಸರ್ಕಾರ ಕಠಿಣ ಕ್ರಮ‌ ಕೈಗೊಳ್ಳಲಿದೆ. ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು ₹ 45 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಉಚಿತ ಹಾಲು ವಿತರಣೆಯನ್ನು ರಾಜ್ಯದಾದ್ಯಂತ ಒಂದು ವಾರದ ಅವಧಿಗೆ ವಿಸ್ತರಿಸಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ.‌ ಸದ್ಯ ರಾಜ್ಯದ ಆರ್ಥಿಕ ಸ್ಥಿತಿ‌ ಸರಿಯಿಲ್ಲ. ಇದನ್ನು ಮತ್ತೆ ಸುಸ್ಥಿಗೆ ತರಲು ‌ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ನುಡಿದರು.

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.