ADVERTISEMENT

ಕಾಲೇಜುಗಳಿಗೆ ಸೌಲಭ್ಯ ₹5.76 ಕೋಟಿ ಅನುದಾನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2019, 19:58 IST
Last Updated 3 ಫೆಬ್ರುವರಿ 2019, 19:58 IST

ಬೆಂಗಳೂರು: ರಾಜ್ಯದ 52 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ, ಪ್ರಯೋಗಾಲಯ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣಕ್ಕೆ ₹5.76 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ನಬಾರ್ಡ್‌ ಸಹಯೋಗದಲ್ಲಿ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಧಿ (ಆರ್‌ಐಡಿಎಫ್) ಯೋಜನೆಯಡಿ ಅನುದಾನ ಬಿಡುಗಡೆಯಾಗಿದೆ.

ನಬಾರ್ಡ್‌ ಅನುಮೋದಿತ 52 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮತಿ ನೀಡಿದ್ದು, ಅನುದಾನವನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡದಿದ್ದಲ್ಲಿ ಆಯಾ ಕಾರ್ಯಪಾಲಕ ಎಂಜಿನಿಯರ್‌ಗಳೇ ಹೊಣೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.