ADVERTISEMENT

‘ಲ್ಯಾಪ್‌ಟಾಪ್‌ ವಿತರಣೆಗೆ ಸರ್ಕಾರದ ಅನುಮೋದನೆ ಅಗತ್ಯ’

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 8:21 IST
Last Updated 3 ಸೆಪ್ಟೆಂಬರ್ 2020, 8:21 IST

ಬೆಂಗಳೂರು: ‘ಬಿಬಿಎಂಪಿ 2020–21ನೇ ಸಾಲಿನ ಬಜೆಟ್‌ನಲ್ಲಿ ನಿರ್ದಿಷ್ಟ ಕಾಮಗಾರಿಗೆ ಕಾಯ್ದಿರಿಸಿದ ಅನುದಾನವನ್ನು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆಗೆ ಬಳಸಲು ಸರ್ಕಾರದಿಂದ ಮತ್ತೆ ಅನುಮೋದನೆ ಪಡೆಯಬೇಕಾಗುತ್ತದೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

ಶಾಲಾ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿ ನಡೆಯುತ್ತಿರುವುದರಿಂದ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಬಗ್ಗೆ ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಇತ್ತೀಚೆಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಅದಕ್ಕೆ ಅನುದಾನ ಬಿಡುಗಡೆ ಆಗಿರಲಿಲ್ಲ.

‘ಪ್ರತಿ ವಾರ್ಡ್‌ನ 15 ಮಂದಿಗೆ ಲ್ಯಾಪ್‌ಟಾಪ್‌ ನೀಡಲು ಪಾಲಿಕೆ ಬಜೆಟ್‌ನಲ್ಲಿ ₹ 15 ಕೋಟಿ ಅನುದಾನ ಕಾಯ್ದಿರಿಸಲಾಗಿದೆ. ಈ ಅನುದಾನದಲ್ಲಿ ಲ್ಯಾಪ್‌ಟಾಪ್‌ ನೀಡಲು ಅಡ್ಡಿ ಇಲ್ಲ. ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಈ ಉದ್ದೇಶಕ್ಕೆ ಬಳಸುವಂತೆ ಶಿಕ್ಷಣ ಸ್ಥಾಯಿ ಸಮಿತಿಯು ನಿರ್ಣಯ ಕೈಗೊಂಡಿದೆ. ಈ ನಿರ್ಣಯ ಜಾರಿಗೊಳಿಸುವುದೆಂದರೆ ಸರ್ಕಾರ ಅನುಮೋದನೆ ನೀಡಿದ್ದ ಬಜೆಟ್‌ನಲ್ಲಿ ಮಾರ್ಪಾಡು ಮಾಡಿದಂತೆ. ಸರ್ಕಾರದ ಅನುಮತಿ ಇಲ್ಲದೇ ಇಂತಹ ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.