ಬೆಂಗಳೂರು: ‘ಉನ್ನತ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸಬೇಕು ಎಂದು ಮಾಡಿಕೊಂಡ ಮನವಿಗೆ ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳು ಸ್ಪಂದಿಸಿವೆ’ ಎಂದು ರಾಜ್ಯಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.
‘ಹುಬ್ಬಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ 10, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 5 ಹಾಗೂ ಬೆಂಗಳೂರಿನ ಜ್ಯೋತಿ ನಿವಾಸ್ ಸ್ವಾಯತ್ತ ಕಾಲೇಜು 5 ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿವೆ. ಉಳಿದ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಇದು ಪ್ರೇರಣೆಯಾಗಲಿ’ ಎಂದೂ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.