ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲು ಹುನ್ನಾರ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಮೇ 2020, 7:08 IST
Last Updated 22 ಮೇ 2020, 7:08 IST
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ   

ಬೆಂಗಳೂರು:ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಕೊರೊನಾ ನೆಪ ಒಡ್ಡಿ ಮುಂದೂಡಲು ಸರ್ಕಾರ ಹುನ್ನಾರ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ರಾಜ್ಯ ಚುನಾವಣಾ ಅಯುಕ್ತ ಡಾ.ಬಿ.ಬಸವರಾಜು ಅವರಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಯದಿದ್ದರೆ ಅದು ಸಂವಿಧಾನದ ಆಶಯಗಳ ಉಲ್ಲಂಘನೆಯಾಗುತ್ತದೆ ಎಂದರು.

ಸ್ವತಂತ್ರ ಸಂಸ್ಥೆಯಾದ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕಿತ್ತು. ಆದರೆ ಅದರ ಮೇಲೆ ಪ್ರಭಾವ ಬೀರುವ ಪ್ರಯತ್ನ ಸರ್ಕಾರದಿಂದ ಆದಂತಿದೆ ಎಂದು ಆರೋಪಿಸಿದರು.

ADVERTISEMENT

ಸಚಿವ ಈಶ್ವರಪ್ಪ ಅವರು ಹೊಸದಾಗಿ ಆಡಳಿತ ಸಮಿತಿ ರಚಿಸುವ ಹೇಳಿಕೆ ನೀಡುತ್ತಲೇ ಇದ್ದಾರೆ. ಇದಕ್ಕೆ ಅವಕಾಶ ಇಲ್ಲ. ಆಯೋಗ ತಕ್ಷಣ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

'ಚುನಾವಣೆ ನಡೆಸಲೇಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.