ADVERTISEMENT

ಸಿಎಂಆರ್‌ ತಾಂತ್ರಿಕ ವಿದ್ಯಾಲಯದಲ್ಲಿ ಪದವಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 16:27 IST
Last Updated 28 ಜೂನ್ 2025, 16:27 IST
ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶನಿವಾರ ಪದವಿ ಪ್ರದಾನ ಮಾಡಲಾಯಿತು
ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶನಿವಾರ ಪದವಿ ಪ್ರದಾನ ಮಾಡಲಾಯಿತು   

ಬೆಂಗಳೂರು: ನಗರದ ಐಟಿಪಿಎಲ್ ರಸ್ತೆಯ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ 22ನೇ ಪದವಿ ಪ್ರದಾನ ಸಮಾರಂಭ ಜರುಗಿತು.

ಪದವಿ ಪೂರೈಸಿದ ಎಂಜಿನಿಯರಿಂಗ್ ವಿಭಾಗಗಳ 1,200 ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರ ಸ್ವೀಕರಿಸಿದರು. ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.

ಆಕ್ಸೆಲ್ ಇಂಡಿಯಾ ಸಂಸ್ಥಾಪಕ ಮತ್ತು ಅನ್‍ಬಾಕ್ಸಿಂಗ್ ಬಿಎಲ್‍ಆರ್ ಫೌಂಡೇಶನ್‍ನ ಸಹ ಸಂಸ್ಥಾಪಕ ಪ್ರಶಾಂತ್ ಪ್ರಕಾಶ್‌ ಮಾತನಾಡಿ, ‘ಕೃಷಿ, ಉತ್ಪಾದನೆ, ರಕ್ಷಣೆ, ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಬೇಕು. ನವೋದ್ಯಮಗಳನ್ನು ಆರಂಭಿಸಬೇಕು’ ಎಂದು ಸಲಹೆ ನೀಡಿದರು.

ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ. ರಾಮಮೂರ್ತಿ ಅವರು, ‘ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ’ ಎಂದು ತಿಳಿಸಿದರು.

ADVERTISEMENT

ಸಿಎಂಆರ್ ವಿಶ್ವವಿದ್ಯಾಲಯದ ಪ್ರೊವೋಸ್ಟ್‌ ತ್ರಿಸ್ತಾ ರಾಮಮೂರ್ತಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಸಿಎಂಆರ್ ಜ್ಞಾನಧಾರ ಟ್ರಸ್ಟ್‌ ಕಾರ್ಯದರ್ಶಿ ಜಗನ್ನಾಥ ರೆಡ್ಡಿ, ವಿಶ್ವವಿದ್ಯಾಲಯದ ಸಹಕುಲಾಧಿಪತಿ ಜಯದೀಪ್ ಕೆ.ಆರ್.ರೆಡ್ಡಿ, ಪ್ರಾಂಶುಪಾಲ ಸಂಜಯ್ ಜೈನ್, ಉಪ ಪ್ರಾಂಶುಪಾಲ ಬಿ. ನರಸಿಂಹಮೂರ್ತಿ, ಡೀನ್ ಚಿತ್ರಾ ಕೆ. ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.