ಯಲಹಂಕ: ಜಾಲಾ ಹೋಬಳಿಯ ಮೀನುಕುಂಟೆ ಹೊಸೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೈನಹಳ್ಳಿ ಗ್ರಾಮದ ಶುಭ ನರಸಿಂಹಮೂರ್ತಿ (ಎಸ್.ಸಿ) ಹಾಗೂ ಸೌಮ್ಯ.ವಿ (ಸಾಮಾನ್ಯ) ಅವಿರೋಧವಾಗಿ ಆಯ್ಕೆಯಾಗಿರುವ ಸದಸ್ಯರು.
ನಾಮಪತ್ರ ಹಿಂಪಡೆಯಲುಸೋಮವಾರ ಕೊನೆಯ ದಿನವಾಗಿತ್ತು. ಒಟ್ಟು 21 ಸದಸ್ಯರ ಬಲ ಅಗತ್ಯವಿರುವ ಗ್ರಾಮ ಪಂಚಾಯಿತಿಗೆ 94 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ 46 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.