ADVERTISEMENT

‘ದೇಶದ್ರೋಹ’ ಪ್ರಕರಣ: ಅಮೂಲ್ಯಾಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 18:39 IST
Last Updated 12 ಜೂನ್ 2020, 18:39 IST

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರಿಂದ ‘ದೇಶದ್ರೋಹ’ ಪ್ರಕರಣದಡಿ ಬಂಧಿಸಲಾಗಿದ್ದ ಅಮೂಲ್ಯಾಗೆ (19) ಜಾಮೀನು ಮಂಜೂರಾಗಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 20ರಂದು ‘ಹಿಂದೂ–ಮುಸ್ಲಿಂ–ಸಿಖ್–ಇಸಾಯಿ ಫೌಂಡೇಷನ್’ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ವೇದಿಕೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯಾಲಿಯೋನ್ (19) ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದರು.

ಹೆಚ್ಚಿನ ವಿಚಾರಣೆಗಾಗಿ ಅಮೂಲ್ಯಾರನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು, ನಂತರ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಅಂದಿನಿಂದ ಆಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಳು. ಇದರ ಮಧ್ಯೆ, ಆಕೆಯ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು.

ADVERTISEMENT

ಪ್ರಕರಣ ಸಂಬಂಧ ಪೊಲೀಸರು, 90 ದಿನವಾದರೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಅಮೂಲ್ಯಾ ಪರ ವಕೀಲರು, ಪುನಃ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿದ ನ್ಯಾಯಾಲಯ, ಜಾಮೀನು ಮಂಜೂರು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.