ADVERTISEMENT

ಅನುದಾನ ಕಡಿತ: ಸಿ.ಎಂ ಮಧ್ಯಸ್ಥಿಕೆಗೆ ಆಗ್ರಹ

ಸಂಘ ಸಂಸ್ಥೆಗಳ ಅನುದಾನ ಕಡಿತ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 21:36 IST
Last Updated 14 ಮಾರ್ಚ್ 2020, 21:36 IST
ಬಿಬಿಎಂಪಿ
ಬಿಬಿಎಂಪಿ    

ಬೆಂಗಳೂರು: ಬಿಜೆಪಿ ನೇತೃತ್ವದ ಬಿಬಿಎಂಪಿ ಆಡಳಿತವು ಸಂಘ ಸಂಸ್ಥೆಗಳಿಗೆ ನೀಡಿದ್ದ ಅನುದಾನ ಕಡಿತ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ವಿಭೂತಿಪುರ ಮಠಕ್ಕೆ ನೀಡಿದ್ದ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಗಂಗಾಂಬಿಕೆ ಅವರು ಮೇಯರ್‌ ಆಗಿದ್ದಾಗ ಮಠಕ್ಕೆ ಭೇಟಿ ನೀಡಿದ್ದರು. ಸಂಸ್ಥೆಯ ಉಚಿತ ವಸತಿ ಶಾಲೆ, ಆಸ್ಪತ್ರೆ ಮತ್ತು ಉಚಿತ ಡಯಾಲಿಸಿಸ್ ಕೇಂದ್ರ ಹಾಗೂ ವೃದ್ಧಾಶ್ರಮಗಳನ್ನು ನೋಡಿ ಸಂತೋಷ ವ್ಯಕ್ತಪಡಿಸಿದ್ದರು. ಸಂಘ ಸಂಸ್ಥೆಗಳ ಅನುದಾನದಡಿಯಲ್ಲಿ ₹75 ಲಕ್ಷ ಮಂಜೂರು ಮಾಡಿದ್ದರು. ಆದರೆ, ಈಗ ಅದನ್ನು ₹4 ಲಕ್ಷಕ್ಕೆ ಇಳಿಸಲಾಗಿದೆ. ಇದರಿಂದ ನಮಗೆ ಮತ್ತು ಸಂಸ್ಥೆಯ ಸಾವಿರಾರು ಅಭಿಮಾನಿಗಳಿಗೆ ನೋವಾಗಿದೆ. ಈ ಮೂಲಕ ಸಮಾಜ ಸೇವಾ ಕಾರ್ಯಗಳಿಗೆ ಅವಮಾನಿಸಲಾಗಿದೆ’ ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಬಿಜೆಪಿ ಆಡಳಿತವು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳದೆ ಕೋಟಿ ಕೋಟಿ ಹಣವನ್ನು ಮನಸ್ಸಿಗೆ ಬಂದಂತೆ ಸಂಸ್ಥೆಗಳಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿ ಅನ್ಯಾಯ ಸರಿಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.