ADVERTISEMENT

ವಕೀಲರ ಪರಿಷತ್‌ ನಿಧಿಗೆ ₹ 100 ಕೋಟಿ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 20:55 IST
Last Updated 16 ಫೆಬ್ರುವರಿ 2020, 20:55 IST
ರಾಜ್ಯ ವಕೀಲರ ಪರಿಷತ್‌ ಅಧ್ಯಕ್ಷ ಜೆ.ಎಂ.ಅನಿಲ್ ಕುಮಾರ್ (ಎಡದಿಂದ ಬಲಕ್ಕೆ ಮೊದಲನೆಯವರು), ಉಪಾಧ್ಯಕ್ಷ ಎನ್‌. ಶಿವಕುಮಾರ್ ಮತ್ತು ಸದಸ್ಯ ಬಿ.ವಿ.ಶ್ರೀನಿವಾಸ್‌ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಹೂಗುಚ್ಛ ನೀಡಿದರು.
ರಾಜ್ಯ ವಕೀಲರ ಪರಿಷತ್‌ ಅಧ್ಯಕ್ಷ ಜೆ.ಎಂ.ಅನಿಲ್ ಕುಮಾರ್ (ಎಡದಿಂದ ಬಲಕ್ಕೆ ಮೊದಲನೆಯವರು), ಉಪಾಧ್ಯಕ್ಷ ಎನ್‌. ಶಿವಕುಮಾರ್ ಮತ್ತು ಸದಸ್ಯ ಬಿ.ವಿ.ಶ್ರೀನಿವಾಸ್‌ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಹೂಗುಚ್ಛ ನೀಡಿದರು.   

ಬೆಂಗಳೂರು: ‘ವಕೀಲರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತಂತೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ₹ 100 ಕೋಟಿ ಅನುದಾನ ಮೀಸಲಿಡಬೇಕು ಎಂಬ ನಮ್ಮ ಮನವಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ರಾಜ್ಯ ವಕೀಲರ ಪರಿಷತ್‌ ತಿಳಿಸಿದೆ.

ಈ ವಿಷಯವನ್ನು ಶುಕ್ರವಾರ ಸುದ್ದಿಗಾರರಿಗೆ ವಿವರಿಸಿದ ಪರಿಷತ್‌ ಅಧ್ಯಕ್ಷ ಜೆ.ಎಂ.ಅನಿಲ್‌ ಕುಮಾರ್, ‘ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ದಾಳಿ ತಡೆಗಟ್ಟಲು ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಮನವಿ ಮಾಡಲಾಗಿದೆ’ ಎಂದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಸಮುದಾಯದ ವಕೀಲರಿಗೆ ಈಗ ನೀಡಲಾಗುತ್ತಿರುವ ಸ್ಟೈಪಂಡ್ ಅನ್ನು ಎಲ್ಲಾ ವರ್ಗಗಳ ಆರ್ಥಿಕವಾಗಿ ಹಿಂದುಳಿದವರಿಗೂ ವಿಸ್ತರಿಸಬೇಕು. ಯುವ ವಕೀಲರಿಗೆ ವೃತ್ತಿ ತರಬೇತಿ ನೀಡುವ ದಿಸೆಯಲ್ಲಿ ಮಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರ್ಗಿಗಳಲ್ಲಿ ಅಕಾಡೆಮಿಗಳನ್ನು ಸ್ಥಾಪಿಸುವ ಯೋಜನೆ ನನೆಗುದಿಗೆ ಬಿದ್ದಿದೆ. ಆದ್ದರಿಂದ ಈ ವರ್ಷ ಒಂದಾದರೂ ಅಕಾಡೆಮಿ ಕೇಂದ್ರ ಸ್ಥಾಪಿಸಬೇಕು. ತಾಲ್ಲೂಕು ಕೇಂದ್ರದಲ್ಲಿ ಇ–ಲೈಬ್ರರಿ ಸ್ಥಾಪಿಸಲು ಕೋರಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.