ಬೆಂಗಳೂರು: ಒಂದು ವಿಧಾನಸಭಾ ಕ್ಷೇತ್ರದ ಪ್ರದೇಶಗಳು ಒಂದೇ ನಗರ ಪಾಲಿಕೆಯಲ್ಲಿ ಇರಬೇಕೆಂಬ ನಿಯಮಗಳಿದ್ದರೂ, ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರದೇಶಗಳು ಎರಡಕ್ಕಿಂತ ಹೆಚ್ಚು ನಗರ ಪಾಲಿಕೆಗಳಲ್ಲಿ ಹಂಚಿಕೆಯಾಗಿವೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ- ಒಟ್ಟು 63 ವಾರ್ಡ್: ಚಾಮರಾಜಪೇಟೆ (10 ವಾರ್ಡ್), ಚಿಕ್ಕಪೇಟೆ (12 ವಾರ್ಡ್), ಸಿ.ವಿ. ರಾಮನ್ ನಗರ (13 ವಾರ್ಡ್), ಗಾಂಧಿನಗರ (10 ವಾರ್ಡ್), ಶಾಂತಿನಗರ (10 ವಾರ್ಡ್), ಶಿವಾಜಿನಗರ (8 ವಾರ್ಡ್).
ಬೆಂಗಳೂರು ಉತ್ತರ ನಗರ ಪಾಲಿಕೆ- ಒಟ್ಟು 72 ವಾರ್ಡ್: ದಾಸರಹಳ್ಳಿ (8 ವಾರ್ಡ್), ಪುಲಕೇಶಿನಗರ (11 ವಾರ್ಡ್) ಬ್ಯಾಟರಾಯನಪುರ (14 ವಾರ್ಡ್), ಯಲಹಂಕ (7 ವಾರ್ಡ್), ರಾಜರಾಜೇಶ್ವರಿನಗರ (5 ವಾರ್ಡ್), ಸರ್ವಜ್ಞನಗರ (16 ವಾರ್ಡ್), ಹೆಬ್ಬಾಳ (11 ವಾರ್ಡ್).
ಬೆಂಗಳೂರು ದಕ್ಷಿಣ ನಗರ ಪಾಲಿಕೆ- ಒಟ್ಟು 72 ವಾರ್ಡ್: ಆನೇಕಲ್ (1 ವಾರ್ಡ್), ಜಯನಗರ (10 ವಾರ್ಡ್), ಪದ್ಮನಾಭನಗರ (6 ವಾರ್ಡ್), ಬಿಟಿಎಂ ಲೇಔಟ್ (13 ವಾರ್ಡ್), ಬೆಂಗಳೂರು ದಕ್ಷಿಣ (19 ವಾರ್ಡ್), ಬೊಮ್ಮನಹಳ್ಳಿ (20 ವಾರ್ಡ್), ಮಹದೇವಪುರ (1 ವಾರ್ಡ್), ಯಶವಂತಪುರ (1 ವಾರ್ಡ್), ರಾಜರಾಜೇಶ್ವರಿ ನಗರ (1 ವಾರ್ಡ್).
ಬೆಂಗಳೂರು ಪೂರ್ವ ನಗರ ಪಾಲಿಕೆ- ಒಟ್ಟು 50 ವಾರ್ಡ್: ಕೆ.ಆರ್. ಪುರ (27 ವಾರ್ಡ್), ಮಹದೇವಪುರ (23 ವಾರ್ಡ್)
ಬೆಂಗಳೂರು ಪಶ್ಚಿಮ ನಗರ ಪಾಲಿಕೆ- ಒಟ್ಟು 111 ವಾರ್ಡ್: ಗೋವಿಂದರಾಜ ನಗರ (13 ವಾರ್ಡ್), ದಾಸರಹಳ್ಳಿ (10 ವಾರ್ಡ್), ಪದ್ಮನಾಭನಗರ (8 ವಾರ್ಡ್), ಬಸವನಗುಡಿ (10 ವಾರ್ಡ್), ಮಲ್ಲೇಶ್ವರ (10 ವಾರ್ಡ್), ಮಹಾಲಕ್ಷ್ಮಿ ಲೇಔಟ್ (12 ವಾರ್ಡ್), ಯಶವಂತಪುರ (11 ವಾರ್ಡ್), ರಾಜರಾಜೇಶ್ವರಿ ನಗರ (13 ವಾರ್ಡ್), ರಾಜಾಜಿನಗರ (11 ವಾರ್ಡ್), ವಿಜಯನಗರ (13 ವಾರ್ಡ್).
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.