ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಬೆಂಗಳೂರು: ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಗುರುವಾರದಿಂದ (ಮೇ 15) ಜಾರಿಗೆ ಬರಲಿದೆ. ಆ ಮೂಲಕ, ಬಿಬಿಎಂಪಿ ಬದಲು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇನ್ನು ಮುಂದೆ ಬೆಂಗಳೂರು ‘ಗ್ರೇಟರ್ ಬೆಂಗಳೂರು’ ಆಗಲಿದೆ. ರಾಜ್ಯದ ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.
ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ: ‘ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿದೆ. ಈ ಅನಾಹುತಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು’ ಎಂದೂ ಮುಖ್ಯಮಂತ್ರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.