ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ನಿವೇಶನದಲ್ಲಿ ನಿರ್ಮಿಸಿರುವ ಮೂರು ಅಂತಸ್ತಿನ ಕಟ್ಟಡಕ್ಕೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದ ಅನ್ವಯ ಈ ವಸತಿ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.
1,200 ಚದರ ಅಡಿ ನಿವೇಶನದಲ್ಲಿ ನೆಲ ಹಾಗೂ 2 ಅಂತಸ್ತು ಅಥವಾ ಸ್ಟಿಲ್ಟ್ + ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲಾಗಿದೆ. ಜಿಬಿಎ ಮುಖ್ಯ ಆಯುಕ್ತರ ಪ್ರಸ್ತಾವವನ್ನು
ಕೂಲಂಕಷವಾಗಿ ಪರಿಶೀಲಿಸಿ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡುವುದರಿಂದ,
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಪ್ರತಿ ವರ್ಷ 1,200 ಚದರಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಗಳಲ್ಲಿ ಸುಮಾರು ನಾಲ್ಕು ಸಾವಿರ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡಲಾಗುತ್ತಿದೆ.: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ನಿವೇಶನದಲ್ಲಿ ನಿರ್ಮಿಸಿರುವ ಮೂರು ಅಂತಸ್ತಿನ ಕಟ್ಟಡಕ್ಕೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದ ಅನ್ವಯ ಈ ವಸತಿ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.
1,200 ಚದರ ಅಡಿ ನಿವೇಶನದಲ್ಲಿ ನೆಲ ಹಾಗೂ 2 ಅಂತಸ್ತು ಅಥವಾ ಸ್ಟಿಲ್ಟ್ + ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲಾಗಿದೆ. ಜಿಬಿಎ ಮುಖ್ಯ ಆಯುಕ್ತರ ಪ್ರಸ್ತಾವವನ್ನು
ಕೂಲಂಕಷವಾಗಿ ಪರಿಶೀಲಿಸಿ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡುವುದರಿಂದ,
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಪ್ರತಿ ವರ್ಷ 1,200 ಚದರಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಗಳಲ್ಲಿ ಸುಮಾರು ನಾಲ್ಕು ಸಾವಿರ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡಲಾಗುತ್ತಿದೆ.
ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಯನ್ನು ಇದೀಗ ‘ನಂಬಿಕೆ ನಕ್ಷೆ’ ವ್ಯವಸ್ಥೆಯಡಿ ‘ಆಟೊಮೇಟೆಡ್ ಆನ್‌ಲೈನ್ ತಂತ್ರಾಂಶ’ದ ಮೂಲಕ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಕರಡು ನಕ್ಷೆ ಮತ್ತು 15 ದಿನದಲ್ಲಿ ಅಂತಿಮ ನಕ್ಷೆ ಮಂಜೂರು ಮಾಡಿ, ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ಕಾಲಮಿತಿಯಲ್ಲಿ ನಕ್ಷೆ ಮಂಜೂರು ಮಾಡಲಾಗುತ್ತಿದೆ.
ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯು ಸ್ಥಳ ಪರಿಶೀಲನೆ, ನಿರ್ಮಾಣ ಮಾಡಿರುವ ಕಟ್ಟಡ ಹಾಗೂ ಅನುಮೋದಿತ ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ಇದರಿಂದ ಸ್ಥಳೀಯ ಸಂಸ್ಥೆಗಳ ಮೇಲೆ ಹೆಚ್ಚಿನ ಕೆಲಸದ ಹೊರೆ ಉಂಟಾಗುತ್ತದೆ. ಅಲ್ಲದೆ, ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ. ‘ನಂಬಿಕೆ ನಕ್ಷೆ’ ವ್ಯವಸ್ಥೆಯಲ್ಲಿ ತ್ವರಿತವಾಗಿ ನಕ್ಷೆ ಮಂಜೂರು ಮಾಡುವುದನ್ನು ಗಮನದಲ್ಲಿರಿಸಿಕೊಂಡು ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡುವುದು ಸೂಕ್ತವಾಗಿರುತ್ತದೆ ಎಂದು ಪ್ರಸ್ತಾವದಲ್ಲಿ ಮುಖ್ಯ ಆಯುಕ್ತರು ವಿವರಿಸಿದ್ದರು.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ– 2024ರಲ್ಲಿ ‘ಸ್ವಾಧೀನಾನುಭವ ಪ್ರಮಾಣ ಪತ್ರದಿಂದ ವಿನಾಯಿತಿ ಪಡೆಯುವ ಕಟ್ಟಡಗಳ ವರ್ಗವನ್ನು ಸರ್ಕಾರ ಅಧಿಸೂಚಿಸಬಹುದು’ ಎಂದು ಹೇಳಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯ ಅಧ್ಯಾಯ 7ರ ನಿಬಂಧನೆಗಳನ್ವಯ ಕಟ್ಟಡ ಮತ್ತು ನಗರ ಯೋಜನಾ ನಿಯಮಗಳ ನಿಯಂತ್ರಣ, ಮೇಲ್ವಿಚಾರಣೆಗಳನ್ನು ಕಾರ್ಯಗತಗೊಳಿಸಲು ಕಾರ್ಯಪಡೆಯೊಂದಿಗೆ ಆಡಳಿತ ರಚನೆಯನ್ನು ಜಿಬಿಎ ಮುಖ್ಯ ಆಯುಕ್ತರು ವಿನ್ಯಾಸಗೊಳಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ವಿದ್ಯುತ್ ಸಂಪರ್ಕಕ್ಕೆ ಅವಕಾಶ
‘ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಇಲ್ಲದೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕವನ್ನು ನೀಡುವಂತಿಲ್ಲ ಎಂಬ ಆದೇಶ 2025ರ ಏಪ್ರಿಲ್‌ನಿಂದ ಜಾರಿಯಾಗಿತ್ತು. ಈಗ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿರುವುದರಿಂದ ಅವರಿಗೆ ವಿದ್ಯುತ್ ಸಂಪರ್ಕ ಸಿಗಲಿದೆ. ಜಿಬಿಎ ವ್ಯಾಪ್ತಿಯಲ್ಲೇ ಸುಮಾರು 50 ಸಾವಿರ ಕಟ್ಟಡಗಳು ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗಿರಲಿಲ್ಲ. ಕಟ್ಟಡ ನಕ್ಷೆ ಮಂಜೂರಾಗಿದ್ದರೆ ಒಸಿಯಿಂದ ವಿನಾಯಿತಿ ಸಿಗಲಿದೆ’ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.