ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಕೊಪ್ಪಳ: ‘ಒಂದೂವರೆ ಕೋಟಿ ಜನಸಂಖ್ಯೆಯಿರುವ ಬೃಹತ್ ಬೆಂಗಳೂರಿನ ಆಡಳಿತವನ್ನು ಒಂದೇ ಮಹಾನಗರ ಪಾಲಿಕೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಅದಕ್ಕಿಂತಲೂ ಹೆಚ್ಚು ಮಹಾನಗರ ಪಾಲಿಕೆಗಳನ್ನು ರಚಿಸಲು ನಿರ್ಧರಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿಗೆ ಸಮೀಪದ ಬಸಾಪುರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ವಿಭಾಗಗಳನ್ನು ರಚಿಸಬೇಕು ಎಂದು ಬಿಜೆಪಿಯ ಎಸ್. ಸುರೇಶ್ ಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದ ಸಮಯದಲ್ಲಿಯೇ ಯೋಜಿಸಿದ್ದರು. ಹಿಂದಿನ ಅವಧಿಗೆ ನಾನು ಮುಖ್ಯಮಂತ್ರಿಯಾಗಿದ್ದಾಗ ಸಮಿತಿ ರಚಿಸಿದ್ದೆ. ಆದ್ದರಿಂದ ನಮ್ಮ ಸರ್ಕಾರ ಈಗ ಆ ಚಿಂತನೆಯನ್ನು ಕಾರ್ಯರೂಪಕ್ಕೆ ತರುತ್ತಿದೆ’ ಎಂದರು.
ಮಹಾನಗರ ವಿಭಜನೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ‘ಕ್ವಾರ್ಟರ್ ಬೆಂಗಳೂರು’ ಎಂದು ಟೀಕಿಸಿದ್ದಾರಲ್ಲ ಎನ್ನುವ ಪ್ರಶ್ನೆಗೆ, ‘ಅಶೋಕಗೆ ಗೊತ್ತಿರುವುದು ಕ್ವಾರ್ಟರ್ ಮಾತ್ರ’ ಎಂದು ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.