
ಗ್ರೇಟರ್ ಬೆಂಗಳೂರು
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಈ ಕೂಡಲೇ ಇದನ್ನು ವಾಪಸ್ ಪಡೆಯಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್‌ಗೆ ರಾಜಕೀಯ ಲಾಭ ಆಗುವ ರೀತಿಯಲ್ಲಿ ವಾರ್ಡ್ ವಿಂಗಡಣೆ ಮಾಡಲಾಗಿದೆ. ಈ ವಿಂಗಡಣೆಯು ಸಾಕಷ್ಟು ನ್ಯೂನತೆಗಳಿಂದ ಕೂಡಿದೆ. ಬೆಂಗಳೂರು ಅಭಿವೃದ್ಧಿಗೆ ಮಾರಕವಾಗಿರುತ್ತದೆ ಎಂದು ಆರೋಪಿಸಿದರು.
ಚುನಾವಣೆ ನಡೆಸಲು ಹೊಸ ವಾರ್ಡ್‌ಗಳಿಗೆ ಕಾರ್ಪೊರೇಟರ್‌ಗಳನ್ನು ನಾಮನಿರ್ದೇಶನ ಮಾಡಲು ಸಂವಿಧಾನವು ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ. 74ನೇ ತಿದ್ದುಪಡಿ ಕಾಯ್ದೆ, 1992ರಿಂದ ಸ್ಥಾಪಿಸಲ್ಪಟ್ಟ ಪುರಸಭೆಯನ್ನು ನಿಯಂತ್ರಿಸುವ ಮೂಲಭೂತ ತತ್ವವೆಂದರೆ ಎಲ್ಲಾ ವಾರ್ಡ್ ಪ್ರತಿನಿಧಿಗಳಿಗೆ ನೇರ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.