ಬೆಂಗಳೂರು: ಆರೋಗ್ಯ ಇಲಾಖೆ ರೂಪಿಸಿರುವ ‘ಗೃಹ ಆರೋಗ್ಯ’ ಯೋಜನೆಯು ಸೋಮವಾರ ರಾಜ್ಯದಾದ್ಯಂತ ವಿಸ್ತರಣೆಯಾಗಲಿದೆ.
ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರದಲ್ಲಿ 2024ರ ಅಕ್ಟೋಬರ್‌ನಲ್ಲಿ ಪ್ರಾರಂಭಿಸಲಾಗಿತ್ತು. ಈಗ ಯೋಜನೆ ವಿಸ್ತರಿಸಲಾಗುತ್ತಿದ್ದು, ಸೋಮವಾರ ಬೆಳಿಗ್ಗೆ 11 ಗಂಟೆಗೆ ಇಲಾಖೆಯು ವಿಕಾಸಸೌಧದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಾಂಕ್ರಾಮಿಕವಲ್ಲದ ರೋಗಗಳ ನಿಯಂತ್ರಣಕ್ಕಾಗಿ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷಗಳು ಮೇಲ್ಪಟ್ಟವರಿಗೆ 14 ಸಾಂಕ್ರಾಮಿಕವಲ್ಲದ ರೋಗಗಳ ಪತ್ತೆಗೆ ತಪಾಸಣೆ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಔಷಧ ಒದಗಿಸುವಿಕೆಯಿಂದ ರೋಗಗಳ ಅಡ್ಡ ಪರಿಣಾಮ ಹಾಗೂ ಅಕಾಲಿಕ ಮರಣ ತಡೆಯಲು ಸಾಧ್ಯ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.