ADVERTISEMENT

ಜಿಎಸ್‌ಟಿ ಕಚೇರಿ ಕೆಲಸಗಾರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 15:22 IST
Last Updated 27 ಜೂನ್ 2022, 15:22 IST

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪ್ರಧಾನ ಕಚೇರಿಯ ಸ್ವಚ್ಛತಾ ಕೆಲಸಗಾರ ಲಕ್ಷ್ಮಣ (26) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ರಾಜಾಜಿನಗರ ನಿವಾಸಿ ಲಕ್ಷ್ಮಣ, ಜಿಎಸ್‌ಟಿ ಕಚೇರಿಯಲ್ಲಿ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಕಚೇರಿ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸೋಮವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಲಕ್ಷ್ಮಣ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಕುಟುಂಬದವರ ವಿಚಾರಣೆ ನಡೆಸಬೇಕಿದೆ’ ಎಂದೂ ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.