ಬೆಂಗಳೂರು: ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
‘ಕಾಲೇಜುಗಳಲ್ಲಿ ಪ್ರಾಧ್ಯಾಪಕರಿಲ್ಲದೇ ತರಗತಿಗಳು ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರನ್ನೂ ನೇಮಿಸಿಕೊಳ್ಳುತ್ತಿಲ್ಲ. ಆದರೆ, ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆಗಳನ್ನು ವಿಶ್ವವಿದ್ಯಾಲಯಗಳು ಹೊರಡಿಸಿವೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.
ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ಪ್ರತಿಭಟನಕಾರರು ತೀರ್ಮಾನಿಸಿದರು.
ಬೆಂಗಳೂರಿನ ಸರ್ಕಾರಿ ಆರ್.ಸಿ ಕಾಲೇಜು, ಮಲ್ಲೇಶ್ವರ ಸರ್ಕಾರಿ ಪದವಿ ಕಾಲೇಜು, ಪೀಣ್ಯ ಸರ್ಕಾರಿ ಪದವಿ ಕಾಲೇಜು, ವಿಜಯನಗರ ಸರ್ಕಾರಿ ಪದವಿ ಕಾಲೇಜು ಸಹಿತ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಎಐಡಿಎಸ್‌ಒ ಜಿಲ್ಲಾ ಸಮಿತಿ ಅಧ್ಯಕ್ಷೆ ಅಪೂರ್ವ ಸಿ.ಎಂ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.