ADVERTISEMENT

ಅವ್ಯವಹಾರ ಪ್ರಕರಣ | ಸಿಬಿಐ ತನಿಖೆಗೆ ಆಗ್ರಹ: ಸಹಿ ಸಂಗ್ರಹ ಅಭಿಯಾನ

​ಪ್ರಜಾವಾಣಿ ವಾರ್ತೆ
Published 10 ಜನವರಿ 2023, 20:06 IST
Last Updated 10 ಜನವರಿ 2023, 20:06 IST

ಬೆಂಗಳೂರು: ‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಲಿಮಿಟೆಡ್‌ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬ್ಯಾಂಕ್‌ನ ಠೇವಣಿದಾರರು ನಗರದಲ್ಲಿ ಮಂಗಳವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ಬಸನಗುಡಿಯಲ್ಲಿರುವ ಕಚೇರಿ ಎದುರು ಸೇರಿದ್ದ ಠೇವಣಿದಾರರು, ಭಿತ್ತಿಪತ್ರಗಳನ್ನು ಹಿಡಿದು ಕೆಲ ಹೊತ್ತು ಪ್ರತಿಭಟನೆ ಸಹ ನಡೆಸಿದರು.

‘ವಂಚನೆ ಪ್ರಕರಣ ನಡೆದು ಮೂರು ವರ್ಷವಾಗಿದೆ. ಠೇವಣಿದಾರರು ಹಾಗೂ ಷೇರುದಾರರಿಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಹೀಗಾಗಿ, ‍ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ನಾವೆಲ್ಲರೂ ಸಹಿ ಸಂಗ್ರಹ ಮಾಡುತ್ತಿದ್ದೇವೆ. ಸಹಿಯುಳ್ಳ ಮನವಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗುವುದು’ ಎಂದು
ಪ್ರತಿಭಟನಕಾರರು ಹೇಳಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.