ಬೆಂಗಳೂರು: ಜಯನಗರದ ವಿಜಯಾ ಕಾಲೇಜಿನ 80ನೇ ವಾರ್ಷಿಕೋತ್ಸವ, ಗುರುವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ-2025 ಸೋಮವಾರ ನೆರವೇರಿತು.
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಧ್ಯಾಪಕರು ಮತ್ತು ಕಾಲೇಜಿನ ಅಭಿಮಾನಿಗಳನ್ನು ಒಂದುಗೂಡಿಸಿದ ಈ ಕಾರ್ಯಕ್ರಮ ಉತ್ಸವವಾಗಿದೆ’ ಎಂದರು.
ವಿಜಯಾ ವಾಣಿಜ್ಯ ಹಳೆಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ರಾಜಶೇಖರ್ ಅವರು, ಉಪನ್ಯಾಸಕರು ಹಾಗೂ ಕಾಲೇಜಿನ ದಿನಗಳನ್ನು ಸ್ಮರಿಸಿಕೊಂಡರು.
ಶಿಕ್ಷಣ ತಜ್ಞ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿ ಸದಸ್ಯರಾಗಿದ್ದ ಎಂ.ಕೆ. ಶ್ರೀಧರ್, ಸರ್ವಮಂಗಳ ಸ್ಮಾರಕ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕೆ.ಆರ್. ಸೋಮಶೇಖರ್, ನಟ- ಚಿತ್ರ ನಿರ್ದೇಶಕ ಸುಚೇಂದ್ರ ಪ್ರಸಾದ್, ಬಿ.ಎಚ್.ಎಸ್. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ. ಎ. ಬಾಲಕೃಷ್ಣ ಅಡಿಗ ಅವರನ್ನು ಸನ್ಮಾನಿಸಲಾಯಿತು. ಗುರುವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಅಂಗವಾಗಿ ನಿವೃತ್ತ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.