ADVERTISEMENT

ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2022, 3:47 IST
Last Updated 27 ಮಾರ್ಚ್ 2022, 3:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ದಿಢೀರ್ ಕುಸಿದು ಬಿದ್ದು ವಿನಯಾ ಕುಮಾರಿ (44) ಎಂಬುವರು ಮೃತಪಟ್ಟಿದ್ದು, ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೃತ ವಿನಯಾಕುಮಾರಿ, ಅವಿವಾಹಿತೆ. ನಗರದ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಲೇಶಪಾಳ್ಯದಲ್ಲಿ ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.

‘ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಮಹಿಳೆ, ಮನೆ ಬಳಿಯ ಜಿಮ್‌ನಲ್ಲಿ ನಿತ್ಯವೂ ಕಸರತ್ತು ನಡೆಸುತ್ತಿದ್ದರು. ಶನಿವಾರವೂ ಬೆಳಿಗ್ಗೆ ಜಿಮ್‌ಗೆ ಹೋಗಿದ್ದರು. ಕಸರತ್ತು ನಡೆಸುತ್ತಿದ್ದ ವೇಳೆಯಲ್ಲೇ ದಿಢೀರ್ ಕುಸಿದು ಬಿದ್ದಿದ್ದರು. ಪ್ರಜ್ಞೆ ಕಳೆದುಕೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ್ದ ವೈದ್ಯರು, ಮಹಿಳೆ ಮೃತಪಟ್ಟಿರುವುದಾಗಿ ಹೇಳಿದರು’ ಎಂದೂ ಪೊಲೀಸರು ಮಾಹಿತಿ ನೀಡಿದರು.

ADVERTISEMENT

ತಲೆಗೆ ಪೆಟ್ಟು: ‘ಕಸರತ್ತು ನಡೆಸುತ್ತಿದ್ದ ವೇಳೆ ಅವರು ತಲೆ ಸುತ್ತಿ ಬಿದ್ದಿದ್ದರು. ಇದರಿಂದಾಗಿ ತಲೆಗೆ ತೀವ್ರ ಪೆಟ್ಟು ಬಿದ್ದು, ಅವರು ಮೃತಪಟ್ಟಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಹಿಳೆ ಕುಸಿದು ಬಿದ್ದಿದ್ದ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.