ADVERTISEMENT

ವರ್ಗಾವಣೆ: ಸರ್ಕಾರಕ್ಕೆ ನೋಟಿಸ್‌

ಪೊಲೀಸ್‌ ಅಧಿಕಾರಿಗಳ ನಿಯಮಬಾಹಿರ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 18:51 IST
Last Updated 26 ಮಾರ್ಚ್ 2019, 18:51 IST
   

ಬೆಂಗಳೂರು: ನಿಯಮ ಬಾಹಿರವಾಗಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿರುವ ಸಚಿವರು, ಶಾಸಕರು ಹಾಗೂ ಸಂಸದರ ವಿರುದ್ಧ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ಮನವಿ ಮಾಡಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಕಾನೂನು ಬಾಹಿರವಾಗಿ ಶಿಫಾರಸು ಮಾಡಿರುವ ರಾಜ್ಯದ 24 ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಮತ್ತವರ ವಿರುದ್ಧ ಎಸ್‌ಐಟಿ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.