ADVERTISEMENT

ಇಬ್ಬರ ‘ಬಲಿ’ ಯಾಕಾಗಿ?

ಗೋಲಿಬಾರ್‌: ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 20:24 IST
Last Updated 19 ಡಿಸೆಂಬರ್ 2019, 20:24 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಇಬ್ಬರು ಅಮಾಯಕರನ್ನು ರಾಜ್ಯ ಸರ್ಕಾರ ಗೋಲಿಬಾರ್ ನಡೆಸಿ ‘ಬಲಿ’ ತೆಗೆದುಕೊಂಡಿದ್ದು ಯಾವ ಕಾರಣಕ್ಕೆ? ಯಾರನ್ನು ಮೆಚ್ಚಿಸಲು ಇಂತಹ ಮತಿಗೇಡಿ ನಿರ್ಧಾರ ತೆಗೆದುಕೊಂಡಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಇಬ್ಬರು ಗೋಲಿಬಾರ್‌ಗೆ ಬಲಿಯಾದ ಘಟನೆ ಹಿನ್ನೆಲೆಯಲ್ಲಿ ಅವರು ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿ, ನಾಲ್ಕು ತಿಂಗಳ ‘ಪವಿತ್ರ ಸರ್ಕಾರ’ದ ಕಾರ್ಯವೈಖರಿಯನ್ನು ಖಂಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೆಚ್ಚಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಮಾಯಕರ ಮೇಲೆ ಗುಂಡು ಸಿಡಿಸಿತೆ?ಅಧಿಕಾರಿಗಳು ತಾವಾಗಿಯೇ ಶಾಂತಿಯುತ ಪ್ರತಿಭಟನೆ ತಹಬದಿಗೆ ತರಲು ಅವಿವೇಕದ ನಿರ್ಧಾರ ಕೈಗೊಂಡರೆ? ರಾಜ್ಯ ಸರ್ಕಾರ ಶೌರ್ಯ ಪ್ರದರ್ಶನಕ್ಕೆ ಇಂತಹ ಆದೇಶ ನೀಡಿತೆ? ಎಂದು ಕೇಳಿದ್ದಾರೆ. ಪೋಲೀಸರ ಗುಂಡಿಗೆ ಬಲಿಯಾದ ಅಮಾಯಕರ ಕುಟುಂಬದ ಜವಾಬ್ದಾರಿ ಹೊರುವವರು ಯಾರು?ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಯಾರೂ ಪ್ರತಿಭಟಿಸಲೇಬಾರದೆ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.