ADVERTISEMENT

ಎಚ್‌1ಎನ್‌1: ಸಾವಿನ ಸಂಖ್ಯೆ 3ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 20:21 IST
Last Updated 27 ಫೆಬ್ರುವರಿ 2020, 20:21 IST

ಬೆಂಗಳೂರು: ರಾಜ್ಯದಲ್ಲಿ ಎಚ್‌1ಎನ್‌1 ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆಕೊನೆಯುಸಿರೆಳೆದಿದ್ದಾರೆ.

ಕಳೆದ ವರ್ಷ ಈ ಸೋಂಕಿಗೆ 96 ಮಂದಿ ಮೃತಪಟ್ಟಿದ್ದರು. ಇದೀಗ ವರ್ಷಾರಂಭದಲ್ಲಿಯೇ ಈ ಸೋಂಕು ಬಲಿ ತೆಗೆದುಕೊಳ್ಳಲಾರಂಭಿಸಿದೆ.

ಎರಡು ದಿನಗಳ ಹಿಂದಷ್ಟೇತುಮಕೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿತ್ತು.

ADVERTISEMENT

ರಾಜ್ಯದಲ್ಲಿ 2,011 ಶಂಕಿತರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ
ಒಳಪಡಿಸಲಾಗಿದೆ.

ಅದರಲ್ಲಿ 208 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ಭೀತಿಯ ನಡುವೆಯೇ ಈ ಸೋಂಕಿಗೆ ಒಳಪಡುವವರ ಸಂಖ್ಯೆ ಹೆಚ್ಚುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.