ADVERTISEMENT

ಕಾರ್ಪೋರೇಟರ್‌ ಪತಿಗೆ ಸಿಸಿಬಿ ಶೋಧ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2018, 19:52 IST
Last Updated 13 ನವೆಂಬರ್ 2018, 19:52 IST

ಬೆಂಗಳೂರು: ಹಫ್ತಾ ವಸೂಲಿ ಹಾಗೂ ರೌಡಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಆರೋಪದಡಿ ಶಿವಾಜಿನಗರದ ಇಫ್ತಿಯಾಕ್ ಅಹಮದ್ ಮನೆ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ಮಾಡಿದರು.

ಇಫ್ತಿಯಾಕ್,ಶಿವಾಜಿನಗರ ಕಾರ್ಪೋರೇಟರ್ ಫರೀದಾ ಅವರ ಪತಿ. ಆತನ ವಿರುದ್ಧ ಕೆಲ ಸ್ಥಳೀಯರು, ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರಿಗೆ ದೂರು ಕೊಟ್ಟಿದ್ದರು. ಅದರನ್ವಯ ದಾಳಿ ನಡೆಸಿದ ಪೊಲೀಸರು, ಮನೆಯಲ್ಲಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದರು. ಆದರೆ, ಇಫ್ತಿಯಾಕ್ ಮನೆಯಲ್ಲಿ ಇರಲಿಲ್ಲ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ.

‘ಆ್ಯಂಬಿಡೆಂಟ್’ ಕಂಪನಿ ವಂಚನೆ ಪ್ರಕರಣದಲ್ಲಿ ಇಫ್ತಿಯಾಕ್‌ನ ಪಾತ್ರವೂ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಿಸಿಬಿ ಡಿಸಿಪಿ ಎಸ್.ಗಿರೀಶ್, ‘ಆ್ಯಂಬಿಡೆಂಟ್ ಪ್ರಕರಣಕ್ಕೂ ಇಫ್ತಿಯಾಕ್‌ಗೂ ಸಂಬಂಧವಿರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.