ADVERTISEMENT

ಎಚ್‌ಎಎಲ್‌: ಮತ್ತೆ ಎರಡು ಆಂಬುಲೆನ್ಸ್ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 19:49 IST
Last Updated 15 ಸೆಪ್ಟೆಂಬರ್ 2020, 19:49 IST

ಬೆಂಗಳೂರು: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹಾಗೂ ವಿವಿಧ ವೈದ್ಯಕೀಯ ಸೇವೆಗಳಿಗಾಗಿ ಮತ್ತೆ ಎರಡು ಆಂಬುಲೆನ್ಸ್‌ಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನಗರದ ಸರ್ಕಾರಿ ಆಸ್ಪತ್ರೆಗಳಿಗೆ ಮಂಗಳವಾರ ಹಸ್ತಾಂತರಿಸಿದೆ.

ಕೆಲ ದಿನಗಳ ಹಿಂದಷ್ಟೇ ಸಂಸ್ಥೆಯು ಎರಡು ಆಂಬುಲೆನ್ಸ್‌ ಗಳನ್ನುಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಹಸ್ತಾಂತರಿಸಿತ್ತು. ವಿಕ್ಟೋರಿಯಾ ಆಸ್ಪತ್ರೆ ಆವರಣದ ನೆಪ್ರೊ ಯುರಾಲಜಿ ಸಂಸ್ಥೆ ಹಾಗೂ ಇಂದಿರಾನಗರದ ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ತಲಾ ಒಂದು ಆಂಬುಲೆನ್ಸ್‌ನೀಡಿದೆ.

ಆಂಬುಲೆನ್ಸ್‌ನಲ್ಲಿ ಆಮ್ಲಜನಕ ವಿತರಣಾ ವ್ಯವಸ್ಥೆ, ವೈದ್ಯರಿಗೆ ಪ್ರತ್ಯೇಕ ಆಸನ ಸೇರಿದಂತೆ ವಿವಿಧ ಸೌಲಭ್ಯಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.