ಬೆಂಗಳೂರು: ಹಂಸ ಜ್ಯೋತಿ ಟ್ರಸ್ಟ್ ನಗರದಲ್ಲಿ ಹಮ್ಮಿಕೊಂಡಿದ್ದ ‘ಹಂಸ ಜ್ಯೋತಿ ಸುವರ್ಣ ಸಂಭ್ರಮಾಚರಣೆ’ ಸಮಾರಂಭದಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ರಂಗದಲ್ಲಿ ಅನನ್ಯ ಕೊಡುಗೆ ನೀಡಿದ ಹತ್ತು ಮಂದಿಗೆ ‘ಹಂಸ ಸಮ್ಮಾನ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಭಾರತೀಯ ಭೂ ವೈಜ್ಞಾನಿಕ ಸಮೀಕ್ಷೆ ಮಹಾ ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಾವಿದ ಆರ್.ಕೆ. ಪ್ರಸನ್ನ ಕುಮಾರ್, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕಿ ನಿರ್ಮಲಾ ಎಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಶಶಿಕಲಾ, ರೂಪಕಲಾ ನೃತ್ಯ ಶಾಲೆಯ ನಿರ್ದೇಶಕಿ ರೂಪಶ್ರೀ ಅರವಿಂದ, ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಜಗದೀಶ, ಓಂ ಯೋಗ ಮತ್ತು ಧ್ಯಾನ ತರಬೇತಿ ಕೇಂದ್ರದ ನಿರ್ದೇಶಕಿ ಕೆ.ಎಸ್. ಕೊಟ್ರಮ್ಮ ಅವರು ಪ್ರಶಸ್ತಿ ಸ್ವೀಕರಿಸಿದರು.
ಮಾರುತಿ ಸಿಲ್ಕ್ಸ್‌ನ ನಿರ್ವಾಹಕ ಎಚ್ .ಲೋಕೇಶ್, ಕರ್ನಾಟಕ ಯುವ ಸಂಸ್ಥೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ಫಣಿಂದ್ರ ಪ್ರಸಾದ್ ಹಾಗೂ ಮುಂಬೈನ ಆಲ್ ಇಂಡಿಯಾ ಪಿಕಲ್ ಬಾಲ್ ಸಂಸ್ಥೆಯ ಪ್ರತಿನಿಧಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ. ರಾಮಚಂದ್ರ, ಮಾಜಿ ಶಾಸಕ ಎಸ್. ಬಾಲರಾಜ್, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎಂ. ಮುನಿನಾರಾಯಣಪ್ಪ, ಚಲನಚಿತ್ರ ನಿರ್ಮಾಪಕಿ ಸುಕನ್ಯಾ ಹಿರೇಮಠ, ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷಣಿ ಗೌಡ, ಕರ್ನಾಟಕ ಪದ್ಮಶಾಲಿ ಸಂಘದ ಅಧ್ಯಕ್ಷ ಎನ್. ಜಗದೀಶ್ ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರದಾನದ ಬಳಿಕ ಸಂಗೀತ–ನೃತ್ಯ ಕಾರ್ಯಕ್ರಮಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.