ಬೆಂಗಳೂರು: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಕೇಂದ್ರವಾದ ಹಂಸಲೇಖ ದೇಸಿ ವಿದ್ಯಾಸಂಸ್ಥೆಯು 2020-21ನೇ ಶೈಕ್ಷಣಿಕ ಸಾಲಿನ ಬಿ.ಮ್ಯೂಸಿಕ್ ಹಾಗೂ ಎಂ.ಮ್ಯೂಸಿಕ್ ಪದವಿ ಕೋರ್ಸ್‍ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದೆ.
ಬಿ.ಮ್ಯೂಸಿಕ್ ಕೋರ್ಸ್‍ಗೆ ಐವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಯೋಜನೆಯನ್ನು ಹಂಸಲೇಖ ಮ್ಯೂಸಿಕ್ ಟ್ರಸ್ಟ್ ಪ್ರಾಯೋಜಿಸಲಿದೆ.ಪಿಯುಸಿ ಪಾಸಾದ, ಆರ್ಥಿಕವಾಗಿ ಹಿಂದುಳಿದ ಹಾಗೂ ಸಂಗೀತದಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಕ್ಕೆ (9980742143/ 9535704501) ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.