ADVERTISEMENT

₹ 200 ಕೋಟಿ ಪ್ರಸ್ತಾವ ಸಲ್ಲಿಕೆ: ಬೇಳೂರು ರಾಘವೇಂದ್ರ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 20:35 IST
Last Updated 26 ನವೆಂಬರ್ 2020, 20:35 IST
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಮಹಾತ್ಮಗಾಂಧಿ ಸೇವಾಟ್ರಸ್ಟ್‌ನ ಸಂಸ್ಥಾಪಕ ವಿನಯ ಗುರೂಜಿ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮಾನಂದ ನಾಯ್ಕ್‌ ಇದ್ದರು.
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಮಹಾತ್ಮಗಾಂಧಿ ಸೇವಾಟ್ರಸ್ಟ್‌ನ ಸಂಸ್ಥಾಪಕ ವಿನಯ ಗುರೂಜಿ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮಾನಂದ ನಾಯ್ಕ್‌ ಇದ್ದರು.   

ಬೆಂಗಳೂರು: ‘ಎರಡು ವರ್ಷಗಳಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನ ಮಾಡಲು ₹ 200 ಕೋಟಿ ಅನುದಾನ ನೀಡುವಂತೆ ಕೇಂದ್ರದ ಜವಳಿ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದರು.

ನಿಗಮದ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಅವರು, ‘ರಾಜ್ಯದ ಕರಕುಶಲಕರ್ಮಿಗಳಿಗೆ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ಜತೆಗೆ ಮಾರಾಟಕ್ಕೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ. ನಿಗಮದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT