ADVERTISEMENT

ಇಂದು ಹನುಮ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 19:02 IST
Last Updated 8 ಡಿಸೆಂಬರ್ 2019, 19:02 IST

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಕೊಡಿಗೇಹಳ್ಳಿಯ ಗುಂಡಾಂಜನೇಯಸ್ವಾಮಿ ದೇವಾಲಯ ದಲ್ಲಿ ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಇದೇ 9ರಂದು ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.

‘ಆಂಜನೇಯ ಸ್ವಾಮಿ ಮೂರ್ತಿಗೆ ವಿಶೇಷ ಅಲಂಕಾರ ಹಾಗೂ ಪೂಜೆ, 1008 ಲೀಟರ್‌ ಹಾಲಿ ನಿಂದ ಅಭಿಷೇಕ ಹಾಗೂ 1,008 ಕೆಜಿ ವಿವಿಧ ಬಗೆಯ ಹೂವುಗಳಿಂದ ಪುಷ್ಪಾರ್ಚನೆ ನೆರವೇರಿ ಸಲಾಗುವುದು’ ಎಂದು ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 12 ಭಜನಾ ತಂಡಗಳನ್ನು ಆಹ್ವಾನಿಸ ಲಾಗಿದ್ದು, ಬೆಳಗ್ಗೆ 9ರಿಂದ ರಾತ್ರಿ 9 ರವರೆಗೆ ನಿರಂತರವಾಗಿ ಹನುಮ ಮತ್ತು ರಾಮದೇವರ ಕೀರ್ತನೆಯ ಭಜನಾ ಕಾರ್ಯಕ್ರಮ ನಡೆಯಲಿದೆ. ಹನುಮ ವೇಷಧಾರಿ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.