ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿರ್ದೇಶಕ ಎಚ್.ಎನ್. ಅಶೋಕ (ತಮ್ಮಾಜಿ) ಅಧ್ಯಕ್ಷತೆಯಲ್ಲಿ ಗುರುವಾರ ಪದಾಧಿಕಾರಿಗಳ ಚುನಾವಣೆ ನಡೆಯಿತು. ಗೌರವ ಅಧ್ಯಕ್ಷರಾಗಿ ಬಿ. ಕೆಂಚಪ್ಪಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ್ ಹಾಗೂ ಸಿ. ದೇವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಸಿ. ಜಯಮುತ್ತು, ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡ, ಖಜಾಂಚಿಯಾಗಿ ಸಿ.ಎಂ.ಮಾರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.