ಬೆಂಗಳೂರು: ‘ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ನಗರದಲ್ಲಿ ಇದುವರೆಗೂ ವರದಿಯಾಗಿಲ್ಲ. ಅಂತಹ ಪ್ರಕರಣಗಳು ವರದಿಯಾದರೆ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದರು.
ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ರಾಜ್ಯದ ವಿವಿಧೆಡೆ ವರದಿಯಾಗಿವೆ. ಆದ್ದರಿಂದ ಕೆಲವು ಮಾರ್ಗಸೂಚಿ ಜಾರಿಗೊಳಿಸುವುದರ ಕುರಿತು ಸರ್ಕಾರದ ಮಟ್ಟದಲ್ಲಿ ಸಭೆಗಳು ನಡೆದಿವೆ. ಅವುಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಹೇಳಿದರು.
ಮೈಕ್ರೊ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ತಕ್ಷಣ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಬಹುದು ಅಥವಾ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತಾರೆ ಎಂದರು.
ಮೀಟರ್ ಬಡ್ಡಿ ದಂಧೆಯ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.