ADVERTISEMENT

ಅರಣ್ಯವಾಸಿಗಳಿಗೆ ಕಿರುಕುಳ: ಗೃಹ ಸಚಿವರಿಗೆ ಅಹವಾಲು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 19:00 IST
Last Updated 4 ಫೆಬ್ರುವರಿ 2022, 19:00 IST
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಾಗರಹೊಳೆ ಅರಣ್ಯವಾಸಿಗಳು ಮನವಿ ಸಲ್ಲಿಸಿದರು. ವಿಧಾನಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಇದ್ದರು
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಾಗರಹೊಳೆ ಅರಣ್ಯವಾಸಿಗಳು ಮನವಿ ಸಲ್ಲಿಸಿದರು. ವಿಧಾನಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಇದ್ದರು   

ಬೆಂಗಳೂರು: ನಾಗರಹೊಳೆ ಅರಣ್ಯವಾಸಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.

ಗುರುವಾರ ತಮ್ಮನ್ನು ಭೇಟಿ ಮಾಡಿದ ಜೇನು ಕುರುಬ ಸಮುದಾಯದ ಸುಶೀಲಾ ಮತ್ತು ಶಿವು ಅವರು ಅರಣ್ಯಾಧಿಕಾರಿಗಳಿಂದ ಆಗುತ್ತಿರುವ ಕಿರುಕುಳದ ಬಗ್ಗೆ ವಿವರಿಸಿದರು.

ಯಾರ ರಕ್ಷಣೆಯೂ ಇಲ್ಲದೇ, ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿ ಬದುಕು ಕಟ್ಟಿ ಕೊಂಡಿರುವ ಅರಣ್ಯವಾಸಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಬೇಕು ಎಂದು ಜ್ಞಾನೇಂದ್ರ ಸೂಚನೆ ನೀಡಿದರು.

ADVERTISEMENT

‘ಸದ್ಯವೇ ನಾಗರಹೊಳೆ ಪ್ರದೇಶಕ್ಕೆ ಭೇಟಿ ನೀಡಿ, ಅರಣ್ಯವಾಸಿಗಳಿಂದ ಅಹವಾಲುಗಳನ್ನು ಸ್ವೀಕರಿಸುತ್ತೇನೆ’ ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯ ಶಾಂತರಾಮ್‌ ಸಿದ್ದಿ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.