ADVERTISEMENT

ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಕಠಿಣಶಿಕ್ಷೆ: ಸಚಿವ ದಿನೇಶ್‌ ಗುಂಡೂರಾವ್‌

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 23:22 IST
Last Updated 28 ಜುಲೈ 2024, 23:22 IST
ಬೆಂಗಳೂರು ಸರ್ಜಿಕಲ್‌ ಸೊಸೈಟಿಯ ಅಧ್ಯಕ್ಷ ಡಾ. ರಾಜಶೇಖರ್‌ ಸಿ.ಜಾಕಾ ಅವರನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಗೌರವಿಸಿದರು
ಬೆಂಗಳೂರು ಸರ್ಜಿಕಲ್‌ ಸೊಸೈಟಿಯ ಅಧ್ಯಕ್ಷ ಡಾ. ರಾಜಶೇಖರ್‌ ಸಿ.ಜಾಕಾ ಅವರನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಗೌರವಿಸಿದರು   

ಯಲಹಂಕವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ, ನಿಂದನೆ, ಅಗೌರವ ತೋರಿದವರ ವಿರುದ್ಧ ಕ್ರಮಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗಿದೆ. ನಕಲಿ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದರು.

ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ನವರತ್ನ ಅಗ್ರಹಾರ ಬಳಿ ಆಯೋಜಿಸಿದ್ದ ಬೆಂಗಳೂರು ಸರ್ಜಿಕಲ್‌ ಸೊಸೈಟಿಯ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಸಾಧಕ ವೈದ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನ ಸರ್ಜಿಕಲ್‌ ಸೊಸೈಟಿಗೆ 50 ವರ್ಷ ತುಂಬಿರುವುದು ದೊಡ್ಡ ಸಾಧನೆಯಾಗಿದೆಸೊಸೈಟಿಯ ಕಚೇರಿಗಾಗಿ ಜಾಗ ನೀಡುವಂತೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಬೆಂಗಳೂರು ಸರ್ಜಿಕಲ್‌ ಸೊಸೈಟಿಯ ಅಧ್ಯಕ್ಷ ಡಾ. ರಾಜಶೇಖರ್‌ ಸಿ.ಜಾಕಾ, ಮುಖ್ಯಮಂತ್ರಿಯವರ ಗೌರವ ವೈದ್ಯಕೀಯ ಸಲಹೆಗಾರ ಡಾರವಿಕುಮಾರ್‌ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ರಮೇಶ್‌, ಬೆಂಗಳೂರು ಸರ್ಜಿಕಲ್‌ ಸೊಸೈಟಿಯ ಕಾರ್ಯದರ್ಶಿ ಡಾ.ಮುನಿರೆಡ್ಡಿ ಎಂ.ವಿ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.