ADVERTISEMENT

ಹ್ಯಾಶಿಶ್‌ ಆಯಿಲ್‌ ದಂಧೆ: ನಾಲ್ವರು ಅಂತರರಾಜ್ಯ ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 5:49 IST
Last Updated 14 ಜುಲೈ 2022, 5:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಅಲೆಮಾರಿಗಳ ಸೋಗಿನಲ್ಲಿ ಹ್ಯಾಶಿಶ್‌ ಆಯಿಲ್‌ ಹಾಗೂ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಅಂತರರಾಜ್ಯ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 4 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಪಬ್‌ಗಳಲ್ಲಿ ಡಿ.ಜೆಯಾಗಿ‌ ಕೆಲಸ ಮಾಡುತ್ತಿದ್ದ ಜೂಡ್ ಹ್ಯಾರೀಸ್, ಶ್ರೀನಿವಾಸ್, ವಂತಲಾ ಪ್ರಹ್ಲಾದ್, ಮಲ್ಲೇಶ್ವರಿ, ಸತ್ಯವತಿ ಬಂಧಿತರು. ಜೂಡ್‌ ಹ್ಯಾರೀಸ್‌ ಪ್ರಕರಣದ ಸೂತ್ರಧಾರ.

ಅರಣ್ಯಾಧಿಕಾರಿಗಳ ಕಣ್ತಪ್ಪಿಸಿ ಆರೋಪಿಗಳು, ಆಂಧ್ರಪ್ರದೇಶದ ವಿಶಾಖಪಟ್ಟಣದ ಅರಕು ಹಾಗೂ ಸೆಂಥಿಪಲ್ಲಿ ಅರಣ್ಯಕ್ಕೆ ನುಗ್ಗಿ ಅಲ್ಲಿ ಗಾಂಜಾ ಬೆಳೆದು ಹ್ಯಾಶಿಶ್‌ ಆಯಿಲ್‌ ತಯಾರಿಸುತ್ತಿದ್ದರು. ಅದನ್ನು ಕೊಚ್ಚಿ, ಚೆನ್ನೈ, ಹೈದರಾಬಾದ್, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರದ ಗ್ರಾಹಕರಿಗೆ ಪೂರೈಸುತ್ತಿದ್ದರು. ಪ್ರಕರಣದ ಯಾವುದೇ ಕುರುಹು ಸಿಗದಂತೆ ತಂತ್ರ ರೂಪಿಸಿದ್ದರು. ಯಾರೂ ಮೊಬೈಲ್‌ ಹಾಗೂ ಗುರುತಿನ ಚೀಟಿ ಬಳಸುತ್ತಿರಲಿಲ್ಲ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ADVERTISEMENT

‘ಆರಂಭದಲ್ಲಿ ಡಿ.ಜೆ ಜೂಡ್‌ನನ್ನು ಬಂಧಿಸಲಾಗಿತ್ತು. ಜೂಡ್‌ ಬಾಯ್ಬಿಟ್ಟ ಮಾಹಿತಿ ಆಧರಿಸಿ ಉಳಿದ ನಾಲ್ವರನ್ನು ಬಂಧಿಸಲಾಯಿತು. ₹ 4 ಕೋಟಿ ಮೌಲ್ಯದ 5 ಕೆ.ಜಿ ಹ್ಯಾಶಿಶ್ ಆಯಿಲ್, 6 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.