ADVERTISEMENT

ಇಐಎ ವಿನಾಯಿತಿ: ಹೈಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 3:23 IST
Last Updated 27 ಸೆಪ್ಟೆಂಬರ್ 2020, 3:23 IST

ಬೆಂಗಳೂರು:100 ಕಿಲೋ ಮೀಟರ್ ವರೆಗಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಯೋಜನೆಗಳಿಗೆ ಪರಿಸರ ಪರಿಣಾಮ ಮೌಲ್ಯಮಾಪನಕ್ಕೆ(ಇಐಎ) ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಕೇಂದ್ರ ಪರಿಸರ, ಅರಣ್ಯ ಸಚಿವಾಲಯ(ಎಂಒಇಎಫ್‌) ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ(ಎನ್‌ಎಚ್‌ಎಐ) ಹೈಕೋರ್ಟ್ ನೋಟಿಸ್ ನೀಡಿದೆ.

ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವಯುನೈಟೆಡ್ ಕನ್ಸರ್ವೇಷನ್‌ ಮೂವ್‌ಮೆಂಟ್ ಆ್ಯಂಡ್ ಚಾರಿಟಬಲ್, ವೆಲ್‌ಫೇರ್ ಟ್ರಸ್ಟ್, ‘ಎಂಒಇಎಫ್‌ನಿಂದ ಈ ವಿನಾಯಿತಿ ನೀಡಿರುವುದು ಪರಿಸರ ಸಂರಕ್ಷಣೆ ಕಾಯ್ದೆಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ ಪರಿಸರ ಸೂಕ್ಷ್ಮ ಪ್ರದೇಶಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT