ADVERTISEMENT

ದೇವೇಗೌಡರ ಆರೋಗ್ಯ ವಿಚಾರಿಸಿದ ಶ್ರವಣಬೆಳಗೊಳ ಮಠದ ಚಾರುಶ್ರೀ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 19:05 IST
Last Updated 18 ಅಕ್ಟೋಬರ್ 2025, 19:05 IST
ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಪೀಠಾಧಿಪತಿ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಬೆಂಗಳೂರಿನಲ್ಲಿ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಪ್ರಸಾದವನ್ನು ಅರ್ಪಿಸಿದರು.
ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಪೀಠಾಧಿಪತಿ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಬೆಂಗಳೂರಿನಲ್ಲಿ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಪ್ರಸಾದವನ್ನು ಅರ್ಪಿಸಿದರು.   

ಬೆಂಗಳೂರು: ಶ್ರವಣಬೆಳಗೊಳ ಮಠದ ‌ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಶನಿವಾರ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.

ದೇವರ ಪ್ರಸಾದ, ಶ್ರೀಮಠದ ಫಲ ತಾಂಬೂಲ, ಪುಷ್ಪಮಾಲೆಯೊಂದಿಗೆ ಪದ್ಮನಾಭನಗರದಲ್ಲಿರುವ ಅವರ ಮನೆಗೆ ತೆರಳಿದ ಸ್ವಾಮೀಜಿ, ದೇವೇಗೌಡರ ಹಣೆ ಹಾಗೂ ತಲೆಗೆ ಗಂಧೋದಕ ಹಚ್ಚಿದರು.

ಜಿನೈಕ್ಯರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಕೊಡುಗೆ, ಬಾಂಧವ್ಯವನ್ನು ಗೌಡರು ಸ್ಮರಿಸಿದರು.

ADVERTISEMENT

ಜ್ವರ, ಮೂತ್ರ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಗೌಡರು, ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.