ADVERTISEMENT

ವೈದ್ಯರ ಮೇಲೆ ಹಲ್ಲೆ ತಡೆಗೆ ಕಠಿಣ ಕಾನೂನು: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 19:47 IST
Last Updated 20 ಜೂನ್ 2019, 19:47 IST
ಎಚ್.ಡಿ.‌ ಕುಮಾರಸ್ವಾಮಿ
ಎಚ್.ಡಿ.‌ ಕುಮಾರಸ್ವಾಮಿ   

ಬೆಂಗಳೂರು: ‘ವೈದ್ಯರ ಮೇಲಿನ ಹಲ್ಲೆ ತಡೆಗೆ ಸದ್ಯ ಇರುವ ಕಾನೂನು ಬಲಪಡಿಸಲು ಸರ್ಕಾರ ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಗುರುವಾರಇಲ್ಲಿ ತಿಳಿಸಿದರು.

‘ವೈದ್ಯರ ಮೇಲೆ ಹಲ್ಲೆ ಮಾಡಿದವರಿಗೆ 9 ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ತಮಿಳುನಾಡಿನಲ್ಲಿದೆ.2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲೂ ಮೊದಲ ಬಾರಿಗೆ ಹಲ್ಲೆ ತಡೆಗೆ ಕಾನೂನು ರೂಪಿಸಿದೆ. ಅದರಂತೆ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು, ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಇದೆ’ ಎಂದು ವಿವರಿಸಿದರು.

‘ಅಗತ್ಯ ಎನಿಸಿದರೆ ಈ ಕಾನೂನಿಗೆ ಕೆಲ ಮಾರ್ಪಾಡುಗಳನ್ನು ಮಾಡಿ ಇನ್ನಷ್ಟು ಬಲಿಷ್ಠಗೊಳಿಸಲಾಗುವುದು.ಈಗಿರುವ ಕಾನೂನಿನಂತೆಯೇ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಸಂಬಂಧಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

‘ಆಸ್ಪತ್ರೆಗಳಲ್ಲಿ ಖಾಲಿ ಇರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಭರ್ತಿಗೆ ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನೇಮಕಾತಿಗೆ ಅನುಮತಿ ನೀಡಲು ಹಣಕಾಸು ಇಲಾಖೆ ಪರಿಶೀಲನೆ ನಡೆಸುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.