ADVERTISEMENT

ಬೆಂಗಳೂರು | ₹50 ಸಾವಿರ ಲಂಚ: ಹೆಡ್‌ಕಾನ್‌ಸ್ಟೆಬಲ್‌ ಬಂಧನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 23:04 IST
Last Updated 4 ಸೆಪ್ಟೆಂಬರ್ 2025, 23:04 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಪ್ರಕರಣವೊಂದರಲ್ಲಿ ದೂರುದಾರರನ್ನೇ ಸಾಕ್ಷಿ ಎಂದು ಪರಿಗಣಿಸಲು ₹50,000 ಲಂಚ ಪಡೆಯುತ್ತಿದ್ದ ವೇಳೆ ವಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ದಯಾನಂದ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕೆಂಗೇರಿ ನಿವಾಸಿ ರಾಘವೇಂದ್ರ ಆರ್‌. ಅವರು ಗಲಾಟೆ ವಿಚಾರವೊಂದರಲ್ಲಿ ವಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ರಾಘವೇಂದ್ರ ಅವರನ್ನೇ ಸಾಕ್ಷಿಯಾಗಿ ಪರಿಗಣಿಸಲು ದಯಾನಂದ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ರಾಘವೇಂದ್ರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್‌ಪಿ ಶಿವಪ್ರಸಾದ್‌ ದೇವರಾಜ್‌ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು.

ಅದರಂತೆ ದೂರುದಾರರು ದಯಾನಂದ ಅವರು ತಿಳಿಸಿದ್ದ ಸ್ಥಳಕ್ಕೆ ತೆರಳಿ, ₹50,000 ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.