ಬೆಂಗಳೂರು: ತುಮಕೂರು ಹಾಗೂ ಕುಣಿಗಲ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ರಾಜಗೋಪಾಲನಗರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಟಿ.ಎನ್.ಶ್ರೀನಿವಾಸ್ ಮೃತಪಟ್ಟಿದ್ದಾರೆ.
‘ವೈಯಕ್ತಿಕ ಕೆಲಸವೆಂದು ಹೇಳಿ ಮೂರು ದಿನ ರಜೆ ಪಡೆದು ಶ್ರೀನಿವಾಸ್ ಊರಿಗೆ ಹೋಗಿದ್ದರು. ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕುರುಡಿಹಳ್ಳಿ ಬಸ್ ನಿಲ್ದಾಣದ ಬಳಿ ಸೋಮವಾರ ಅಪಘಾತ ಸಂಭವಿಸಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.