ದಾಬಸ್ ಪೇಟೆ: ಇಲ್ಲಿನ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಬಸವರಾಜು (39) ಅಪಘಾತದಲ್ಲಿ ಶುಕ್ರವಾರ ರಾತ್ರಿ ಮೃತರಾಗಿದ್ದಾರೆ.
ಕೆಲಸ ನಿಮಿತ್ತ (ಡಿ.13) ಶುಕ್ರವಾರ ಸಂಜೆ 7 ಗಂಟೆ ಸಮಯದಲ್ಲಿ ಮಧುಗಿರಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ನರಸೀಪುರಕ್ಕೆ ಹೋಗುವಾಗ ಮಾದೇನಹಳ್ಳಿ ಹತ್ತಿರ ಟ್ರ್ಯಾಕ್ಟರ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು, ಕಸಬಾ ಹೋಬಳಿ ಕಿತ್ತಲಗುಪ್ಪೆ ಗ್ರಾಮದ ಬಸವರಾಜು 2002ರಲ್ಲಿ ಪೊಲೀಸ್ ಇಲಾಖೆಗೆ ಸೇರಿ ಮಾದನಾಯಕನಹಳ್ಳಿ ಹಾಗೂ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸಿದ್ದರು. ಅವರಿಗೆ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.