ADVERTISEMENT

ಆರೋಗ್ಯವೇ ನಿಜವಾದ ಸಂಪತ್ತು: ಶಾಸಕ ಮುನಿರತ್ನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 4:15 IST
Last Updated 1 ಅಕ್ಟೋಬರ್ 2025, 4:15 IST
<div class="paragraphs"><p>ಕೆಂಗುಂಟೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಉಚಿತ ಕನ್ನಡಕಗಳನ್ನು ಶಾಸಕ ಮುನಿರತ್ನ ವಿತರಿಸಿದರು</p></div>

ಕೆಂಗುಂಟೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಉಚಿತ ಕನ್ನಡಕಗಳನ್ನು ಶಾಸಕ ಮುನಿರತ್ನ ವಿತರಿಸಿದರು

   

ರಾಜರಾಜೇಶ್ವರಿ ನಗರ: ‘ಆರೋಗ್ಯವೇ ನಿಜವಾದ ಸಂಪತ್ತು. ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಶಾಸಕ ಮುನಿರತ್ನ ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಕೆಂಗುಂಟೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿಬಿರದಲ್ಲಿ ತಪಾಸಣೆಗೆ ಒಳಪಟ್ಟವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಿ ಮಾತನಾಡಿದರು.

ADVERTISEMENT

ಬೆಂಗಳೂರು ಕೇಂದ್ರ ಜಿಲ್ಲಾ ಜಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಮಲ್ಲತ್ತಹಳ್ಳಿ ಎಂ.ಮಂಜುನಾಥ್, ನರೇಂದ್ರ ಮೋದಿ ನಾಯಕತ್ವದಲ್ಲಿ ‌ರಾಷ್ಟ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ  ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಗೋವಿಂದರಾಜು, ಮುಖಂಡರಾದ ಜಿ.ಶ್ರೀನಿವಾಸ್, ಮಹಿಳಾ ಒಕ್ಕೂಟದ ಅಧ್ಯಕ್ಷೆ ರಾಜಕುಮಾರಿ, ಸುಮಾ,ಮಂಜುಶ್ರೀ, ಕೆಂಗುಂಟೆ ಚಿಕ್ಕಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.