ADVERTISEMENT

ಆರೋಗ್ಯ ಇಲಾಖೆ: ವರ್ಗಾವಣೆಗೆ 15ರೊಳಗೆ ಕೌನ್ಸೆಲಿಂಗ್‌

​ಪ್ರಜಾವಾಣಿ ವಾರ್ತೆ
Published 26 ಜುಲೈ 2019, 19:22 IST
Last Updated 26 ಜುಲೈ 2019, 19:22 IST

ಬೆಂಗಳೂರು: ವೈದ್ಯಾಧಿಕಾರಿಗಳ ಹಾಗೂ ಸಿಬ್ಬಂದಿ ವರ್ಗಾವಣೆಗೆ ಆ.15ರೊಳಗೆ ಕೌನ್ಸೆಲಿಂಗ್‌ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತೀರ್ಮಾನಿಸಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) ಕಾಯ್ದೆ -2011ರ ಪ್ರಕಾರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯಬೇಕು. ಆದರೆ, ಈ ವರ್ಷ ಚುನಾವಣಾ ನೀತಿ ಸಂಹಿತೆ ಜಾರಿಯಾದ್ದರಿಂದ ವರ್ಗಾವಣೆ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗವರ್ಗಾವಣೆ ಕೌನ್ಸೆಲಿಂಗ್‍ಗೆ ಅಧಿಕಾರಿಗಳು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ನಾನಾ ಹಂತಗಳಲ್ಲಿ ಸಮಿತಿಗಳನ್ನು ರಚಿಸಲಾಗಿದೆ.

ಜಿಲ್ಲೆಯೊಳಗಿನ ವರ್ಗಾವಣೆಗಳನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ನಡೆಸಲಿದೆ. ವಿಭಾಗಮಟ್ಟದಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯ ಸಮಿತಿ ಹಾಗೂ ಅಂತರ್ ವಿಭಾಗೀಯ ವರ್ಗಾವಣೆಯನ್ನು ಆರೋಗ್ಯ ಇಲಾಖೆ ಆಯುಕ್ತರ ಅಧ್ಯಕ್ಷತೆಯ ಸಮಿತಿ ಮಾಡಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.