ADVERTISEMENT

ಹೆದ್ದಾರಿ ಅಪಘಾತಕ್ಕೆ ‘ರಾಸ್ತಾ’

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 20:48 IST
Last Updated 8 ಮಾರ್ಚ್ 2023, 20:48 IST

ಬೆಂಗಳೂರು: ಹೆದ್ದಾರಿಗಳಲ್ಲಿ ಸಂಭವಿಸುವ ರಸ್ತೆ ಅಪಘಾತ ಪ್ರಕರಣಗಳಲ್ಲಿ ಕ್ಷಿಪ್ರ ಚಿಕಿತ್ಸೆಗೆ ಆರೋಗ್ಯ ಇಲಾಖೆಯು ‘ರಾಸ್ತಾ’ ಕಾರ್ಯಕ್ರಮ ರೂಪಿಸಿದೆ.

‘ರಸ್ತೆ ಮತ್ತು ಸಾರಿಗೆ ಪ್ರತಿಯೊಬ್ಬರ ಅವಿಭಾಜ್ಯ ಅಂಗವಾಗಿದೆ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ರಸ್ತೆ ಬಳಕೆದಾರರೇ ಆಗಿದ್ದಾರೆ. ರಸ್ತೆ ಅಪಘಾತದಲ್ಲಿ ಪ್ರತಿವರ್ಷ ಲಕ್ಷಾಂತರ ಜೀವಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಕೋಟ್ಯಂತರ ಜನರಿಗೆ ಗಂಭೀರ ಗಾಯವಾಗುತ್ತಿದೆ. ಆದ್ದರಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಜೀವರಕ್ಷಾ ಟ್ರಸ್ಟ್ ಸಹಯೋಗದಲ್ಲಿ ‘ರಾಸ್ತಾ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಡಿ ಪೊಲೀಸರು, ಆಂಬುಲೆನ್ಸ್ ಚಾಲಕರು ಹಾಗೂ ಸಾರ್ವಜನಿಕರಿಗೆ ರಸ್ತೆ ಅಪಘಾತದ ವೇಳೆ ತುರ್ತು ಚಿಕಿತ್ಸೆ ಬಗ್ಗೆ ತರಬೇತಿ ನೀಡಲಾಗುತ್ತದೆ’ ಎಂದು ಇಲಾಖೆ ತಿಳಿಸಿದೆ.

ಈ ಕಾರ್ಯಕ್ರಮದಡಿ ರಾಜ್ಯದ 23 ಟ್ರಾಮಾ ಆಸ್ಪತ್ರೆಗಳನ್ನು ಗುರುತಿಸಲಾಗುತ್ತಿದೆ. ಪ್ರತಿ ಹಾಟ್‌ಸ್ಪಾಟ್‌ನಲ್ಲಿ ಚಿಕಿತ್ಸೆಗೆ ಸಂಬಂಧಿಸಿದಂತೆ 160 ಮಂದಿಗೆ ಕೌಶಲ ವೃದ್ಧಿಸಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.