ADVERTISEMENT

ಉಪವಿಭಾಗಾಧಿಕಾರಿಗೆ ಅಂಕಿತಾಧಿಕಾರಿ ಜವಾಬ್ದಾರಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 15:50 IST
Last Updated 11 ಸೆಪ್ಟೆಂಬರ್ 2025, 15:50 IST
<div class="paragraphs"><p>ಸರ್ಕಾರಿ ಕಚೇರಿ</p></div>

ಸರ್ಕಾರಿ ಕಚೇರಿ

   

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದಲ್ಲಿ ಅಂಕಿತಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳನ್ನು ಬಿಡುಗಡೆಗೊಳಿಸಿ, ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿದೆ. 

ಹೈಕೋರ್ಟ್ ನಿರ್ದೇಶನದ ಅನುಸಾರ ಈ ಕ್ರಮ ಕೈಗೊಳ್ಳಲಾಗಿದೆ. ಅಂಕಿತಾಧಿಕಾರಿ ಹುದ್ದೆಯಲ್ಲಿ 18 ವೈದ್ಯಾಧಿಕಾರಿಗಳು ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿದ್ದರು. ಬಿಡುಗಡೆಗೊಂಡ ಈ ವೈದ್ಯಾಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗೆ ಆರೋಗ್ಯ ಇಲಾಖೆ ಆಯುಕ್ತರಿಗೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.